ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ ಮೊಯಿದ್ದೀನ್ ನಿಧನ

10 Jul 2018 10:44 AM | General
448 Report

ಕಾಂಗ್ರೆಸ್ ಮುಖಂಡ, ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ ಮೊಯಿದ್ದೀನ್ (81)ವಿಧಿವಶರಾಗಿದ್ದಾರೆ. ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಮೊಯಿದ್ದೀನ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಾರದ ಹಿಂದಷ್ಟೇ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. 70ರ ದಶಕದ ಆರಂಭದಲ್ಲಿ ಮೊಯಿದ್ದೀನ್ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ಪ್ರವೇಶಿಸಿದ್ರು. ಬಳಿಕ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 1995ರಲ್ಲಿ ಉನ್ನತ ಶಿಕ್ಷಣ ಹಾಗೂ ಸಣ್ಣ ಕೈಗಾರಿಕಾ ಸಚಿವರಾಗಿದ್ದರು.

Edited By

Shruthi G

Reported By

Shruthi G

Comments