ನಿಮ್ಮ ಮನೆಯಲ್ಲಿ ಗ್ಯಾಸ್ ಕನೆಕ್ಷನ್ ಇದೀಯಾ? ಹಾಗಾದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಗೆ ಬರಲಿದೆ ಈ ಬಂಪರ್ ಮೊತ್ತ ..!!

13 Jul 2018 9:59 AM | General
13701 Report

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಏರಿಕೆಯಾಗಿರುವ ಹಿನ್ನಲೆಯಲ್ಲಿ ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್‌ನ ದರಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರವು ಎಲ್ಪಿಜಿ ಸಬ್ಸಿಡಿ ದರವನ್ನು ಶೇ. 60 ಹೆಚ್ಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಹೆಚ್ಚಳವಾಗದ ಹಿನ್ನಲೆ ಗ್ರಾಹಕರ ಸಬ್ಸಿಡಿಯನ್ನು ಸರ್ಕಾರ ಹೆಚ್ಚಳ ಮಾಡಿದೆ. ಇದರಿಂದ ಗ್ರಾಹಕರು ನಿರಾಳರಾಗಿದ್ದಾರೆ ಎಂದು ಐಒಸಿ ಅಧ್ಯಕ್ಷ ಸಂಜೀವ್ ಸಿಂಗ್ ತಿಳಿಸಿದ್ದಾರೆ. ಹಾಗೇ ಕಳೆದ ಮೇಯಲ್ಲಿ 159.29 ರೂ. ಇದ್ದ ಸಬ್ಸಿಡಿ ಜೂನ್ ತಿಂಗಳಲ್ಲಿ 204.95 ರೂ.ಗೆ ತಲುಪಿದ್ದು, ಈ ತಿಂಗಳ ಆರಂಭದಲ್ಲಿ 257.74 ರೂ.ಗೆ ತಲುಪಿದೆ. ಒಟ್ಟಾರೆಯಾಗಿ ಒಂದೂವರೆ ತಿಂಗಳ ಅವಧಿಯಲ್ಲಿ ಎಲ್ಪಿಜಿ ಸಬ್ಸಿಡಿ ದರದಲ್ಲಿ ಶೇ. 60 ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

Edited By

Shruthi G

Reported By

Shruthi G

Comments