ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ಯಾ? ಹಾಗಾದ್ರೆ ಇಲ್ಲಿದೆ ನೋಡಿ ಗುಡ್ ನ್ಯೂಸ್..!

ಆಧಾರ್ ಕಾರ್ಡ್ ಹೊಂದಿದವರಿಗೊಂದು ಗುಡ್ ನ್ಯೂಸ್ ಇಲ್ಲಿದೆ. ಗ್ರಾಮೀಣ ಪ್ರದೇಶದ ಜನತೆ ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿಯೇ ತಮ್ಮ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಬಹುದಾಗಿದೆ.
ಇಂದು ಬಹುತೇಕ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಇದರಲ್ಲಿ ಏನಾದರೂ ಅಪ್ ಡೇಟ್ ಮಾಡಿಸಬೇಕಾದ ಸಂದರ್ಭ ಬಂದ ವೇಳೆ ಗ್ರಾಮೀಣ ಪ್ರದೇಶದ ಜನತೆ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಹೋಬಳಿ, ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ತೆರಳಿ ದಿನಗಟ್ಟಲೆ ಇದಕ್ಕೆ ವ್ಯಯಿಸಬೇಕಾದ ಪರಿಸ್ಥಿತಿಯಿತ್ತು. ಇದನ್ನು ಮನಗಂಡು ಸರ್ಕಾರ, ಈಗ ರಾಜ್ಯದ 6024 ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ಅಪ್ ಡೇಟ್ ಮಾಡುವ ಅವಕಾಶ ಕಲ್ಪಿಸಿದೆ. ಆಗಸ್ಟ್ ನಿಂದ ಈ ಸೌಲಭ್ಯ ಲಭ್ಯವಾಗಲಿದ್ದು, ಆಧಾರ್ ಕಾರ್ಡ್ ಹೊಂದಿದವರು 25 ರೂ. ಶುಲ್ಕ ಪಾವತಿಸಿ ತಮ್ಮ ಹೆಸರು, ವಿಳಾಸ, ಲಿಂಗ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ, ಜನ್ಮ ದಿನಾಂಕ ಮೊದಲಾದ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಬಹುದಾಗಿದೆ.
Comments