ಇನ್ಮುಂದೆ BPL ಕಾರ್ಡ್ ಪಡೆಯೋದು ಸುಲಭ..! ಆನ್ಲೈನ್’ನಿಂದ 10 ನಿಮಿಷದಲ್ಲಿ ನಿಮ್ಮ ಮನೆಗೆ ಬರಲಿದೆ ರೇಷನ್ ಕಾರ್ಡ್…!!

ಕರ್ನಾಟಕ ರಾಜ್ಯದಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ರೇಷನ್ ಕಾರ್ಡ್ ಮಾಡಿಸಿ ಕೊಡುವ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಮತ್ತೊಮ್ಮೆ ಆನ್‌ಲೈನ್ ನಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ಮತ್ತು ಈ ಹಿಂದಿನ ರೆಷನ್ ಕಾರ್ಡಿನಲ್ಲಿರುವ ತಪ್ಪುಗಳನ್ನು ತಿದ್ದಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.
ಅಷ್ಟೆ ಅಲ್ಲದೆ ಈ ಬಾರಿ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯೂ ಬಿಪಿಎಲ್ ಕಾರ್ಡುದಾರರಿಗೆ SMS ಕಳುಹಿಸುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದೀಗ ಹೊಸ ಕಾರ್ಡ್ ಮಾಡಿಸಿಕೊಳ್ಳಲು ಅನುಮತಿ ಸಿಕ್ಕಿದ್ದು ಇದಕ್ಕಾಗಿ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವೆಬ್ ಸೈಟಿನಲ್ಲಿ ಅವಕಾಶವನ್ನು ನೀಡಲಾಗಿದೆ. ಇದಲ್ಲೇ ಕಳೆದ ಬಾರಿಗಿಂತಲೂ ಈ ಬಾರಿ ಸುಲಭವಾಗಿ ಕಾರ್ಡ್ ಮಾಡಿಸಲು ಹೆಚ್ಚಿನ ಅವಕಾಶವನ್ನು ನೀಡಲಾಗಿದೆ. ಇದು ನಾಗರೀಕರಿಗೆ ಸಹಾಯವನ್ನು ಮಾಡಲಿದೆ. https://ahara.kar.nic.in/home.aspx ವೆಬ್ ಸೈಟ್ ಅನ್ನು ಓಪನ್ ಮಾಡಿಕೊಂಡು ಅದರಲ್ಲಿ ನೀಡಿರುವ ನಿಭಂದನೆಗಳನ್ನು ಪಾಲಿಸುತ್ತಾ ಹೋದರೆ ನಿಮ್ಮ ರೇಷನ್ ಕಾರ್ಡ್ ನಿಮಗೆ ಸಿಗುತ್ತದೆ. ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ಬಳಿಕ ನಿಮ್ಮ ರೆಷನ್ ಕಾರ್ಡ್ ಅನ್ನು ಅಲ್ಲಿಂದಲೇ ಪ್ರಿಂಟ್ ತೆಗೆದುಕೊಳ್ಳಬಹುದು. ಈ ಮಾಹಿತಿಯನ್ನು ಇತರರಿಗೂ ಷೇರ್ ಮಾಡಿ..
Comments