ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ : ಇದೇ ಕಾರಣಕ್ಕೆ ಮೆಟ್ರೋ ಸೇಫ್ ಅಲ್ಲ…!

ಇತ್ತಿಚಿಗೆ ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿಯೂ ಕೂಡ ಅನುಮಾನಸ್ಪದವಾದ ವಸ್ತುಗಳು ಕಂಡು ಬರುತ್ತಿದೆ. ಬೆಂಗಳೂರಿನ ಇಂದಿರಾನಗರ ಮೆಟ್ರೋ ನಿಲ್ದಾಣದಲ್ಲಿ ಬೀಕಾನ್ ಎಂಬ ಬ್ಲೂಟೂತ್ ಸಾಧನ ಪತ್ತೆಯಾಗಿದೆ. ಬ್ಲೂಟೂತ್ ಸಾಧನವನ್ನು ಗುಟ್ಟಾಗಿ ಅಡಗಿಸಿಟ್ಟಿದ್ದ ಭದ್ರತಾ ಸಿಬ್ಬಂದಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.
ಜುಲೈ 14 ರ ಬೆಳಗಿನ ಜಾವ ಸುಮಾರು 5 ಗಂಟೆಯಲ್ಲಿ ನಿಲ್ದಾಣಕ್ಕೆ ಬಂದಿದ್ದ ಭದ್ರತಾ ಸಿಬ್ಬಂದಿ ವನಕಂಡಿ ಎಂಬಾತ ಬೀಕಾನ್ ಬ್ಲೂಟೂತ್ ಸಾಧನವನ್ನು ಇರಿಸಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ಗಮನಿಸಿದಂತಹ ಮೆಟ್ರೊ ಅಧಿಕಾರಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದಂತಹ ಪೊಲೀಸರು ಬ್ಲೂಟೂತ್ ಸಾಧನವನ್ನು ವಶಪಡಿಸಿಕೊಂಡಿದ್ದಾರೆ. ಭದ್ರತಾ ಸಿಬ್ಬಂದಿಯಾದ ವೆನಕಂಡಿ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ.
Comments