ಶೀಘ್ರದಲ್ಲೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲಿರುವ ಸಾರಿಗೆ ಇಲಾಖೆ..!

ಹಳ್ಳಿ ಕಡೆ ಸಾಮಾನ್ಯವಾಗಿ ಒಂದು ಗಾಧೆಯನ್ನು ಹೇಳುತ್ತಾರೆ. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದ್ರು ಅಂತ. ರಾಜ್ಯದಲ್ಲೂ ಬಹುತೇಕ ಅದೇ ಪರಿಸ್ಥಿತಿ ನಿರ್ಮಾಣವಾಗುವ ಲಕ್ಷಣಗಳು ಕಾಣಿಸುತ್ತಿವೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚು ಮಾಡುತ್ತಿದ್ದಂತೆಯೇ ಬಸ್ ಟಿಕೆಟ್ ದರವನ್ನು ಹೆಚ್ಚು ಮಾಡಲು ಚಿಂತನೆ ನಡೆಸಲಾಗುತ್ತಿದೆ.
ಹಾಗಾಗಿ ಸಾಮಾನ್ಯ ಜನರಿಗೆ ಸದ್ಯದಲ್ಲಿಯೇ ಮತ್ತೊಂದು ಶಾಕ್ ನೀಡಲು ಸರ್ಕಾರಿ ಸಾರಿಗೆ ಸಂಸ್ಥೆ ಮುಂದಾಗಲಿದೆ. ಸರ್ಕಾರಿ ಬಸ್ ಗಳ ಟಿಕೆಟ್ ದರವನ್ನು ಹೆಚ್ಚು ಮಾಡುಲ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜು ಅವರು ಸೂಚನೆ ನೀಡಿದ್ದಾರೆ.ಬಸ್ ಟಿಕೆಟ್ ದರವನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುದಾಗಿ ಹೇಳಿರುವ ಪ್ರಧಾನ ಕಾರ್ಯದರ್ಶಿ ಶೇ. 15ರಷ್ಟು ಪ್ರಯಾಣ ದರವನ್ನು ಏರಿಕೆ ಮಾಡುವಂತೆ ಈಗಾಗಲೇ ಪ್ರಸ್ತಾವನೆ ಇಲಾಖೆಗೆ ಬಂದಿದೆ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ. ದರ ಏರಿಕೆ ಸಂಬಂಧ ಮುಂದಿನ ಕ್ರಮವನ್ನು ಸಂಬಂಧಪಟ್ಟವರು ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ನೀಡಿರುವ ಪ್ರಯಾಣ ದರ ಹೆಚ್ಚಳದ ಪ್ರಸ್ತಾವನೆಯನ್ನು ಸಾರಿಗೆ ಸಚಿವ ಡಿ. ಸಿ. ತಮ್ಮಣ್ಣ ಅವರು ಈಗಾಗಲೇ ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ. ಪ್ರಯಾಣ ಹೆಚ್ಚಳ ಸಂಬಂಧ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿ ಶೀಘ್ರದಲ್ಲೇ ತೀರ್ಮಾನ ಹೊರಬೀಳಲಿದೆ.
Comments