ಭೂವಿಜ್ಞಾನ ಮತ್ತು ಗಣಿ ಇಲಾಖೆಯಲ್ಲಿ 283 ಖಾಲಿ ಹುದ್ದೆ ಶೀಘ್ರ ಭರ್ತಿ

21 Jul 2018 12:02 PM | General
379 Report

ಭೂವಿಜ್ಞಾನ ಮತ್ತು ಗಣಿ ಇಲಾಖೆಯಲ್ಲಿ ಖಾಲಿ ಇರುವಂತಹ 849 ಹುದ್ದೆಗಳ ಪೈಕಿ 283 ಹುದ್ದೆಗಳನ್ನು ಕೆಪಿಎಸ್​ಸಿ ಮೂಲಕ ಒಂದು ತಿಂಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ.  

ರಾಜಶೇಖರ್ ಪಾಟೀಲ್ ಅವರು ಶುಕ್ರವಾರ ಚಿಕ್ಕಬಳ್ಳಾಪುರದ ಎಂ.ಸ್ಯಾಂಡ್ ಘಟಕಕ್ಕೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಸರ್ಕಾರದಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಈಗಾಗಲೇ ಮಂಜೂರಾಗಿರುವಂತಹ 1,241 ಹುದ್ದೆಗಳಲ್ಲಿ 398 ಹುದ್ದೆಗಳು ಈಗಾಗಲೇ ಭರ್ತಿಯಾಗಿವೆ ಎಂದರು.

Edited By

Manjula M

Reported By

Manjula M

Comments