ಗುಡ್ ನ್ಯೂಸ್: ಪತ್ರಕರ್ತರಿಗೆ ಆರೋಗ್ಯ ಭಾಗ್ಯ ಕೊಟ್ಟ ಸಚಿವ ಜಿಟಿಡಿ..!

ಪತ್ರಕರ್ತರಿಗೆ ಮತ್ತು ಅವರ ಕುಟುಂಬದವರಿಗಾಗಿ ಆರೋಗ್ಯ ನಿಧಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಿ.ಟಿ. ದೇವೇಗೌಡರು ಹೇಳಿದ್ದಾರೆ. ಈ ಬಗ್ಗೆ ಜಿ.ಟಿ. ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ಪತ್ರಕರ್ತರು ಮತ್ತವರ ಕುಟುಂಬಕ್ಕೆ 5 ಲಕ್ಷ ಮೌಲ್ಯದ ಆರೋಗ್ಯ ಪರಿಹಾರ ಮತ್ತು ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಹಾಯಹಸ್ತ 50 ಲಕ್ಷ ಮೌಲ್ಯದ ಸಂತ್ರಸ್ತ ನಿಧಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.ಈ ವಿಷಯದ ಬಗ್ಗೆ ಮೈಸೂರಿನ ಕಾರ್ಯಕ್ರಮದಲ್ಲಿ ತಿಳಿಸಿದ ಸಚಿವರು, ಪತ್ರಕರ್ತರ ಆರೋಗ್ಯ ನಿಧಿ ಸ್ಥಾಪಿಸುವ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆಯನ್ನು ನೀಡಿದರು. ಯಾರೇ ತಪ್ಪು ಮಾಡಿದರೆ ಅದನ್ನು ಬರೆದು ತಿದ್ದುವ ಕೆಲಸವನ್ನು ಕೆಲಸವನ್ನು ಮಾಡುತ್ತಿದ್ದಾರೆ.. ಹಾಗಾಗಿ ಆರೋಗ್ಯ ವಿಮೆಯನ್ನು ನೀಡಬೇಕು ಎಂದಿದ್ದಾರೆ.
Comments