ಇಂದು ಸಂಜೆ 5 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಜೂನ್. 29 ರಿಂದ ಜುಲೈ. 10 ರ ವರೆಗೆ ರಾಜ್ಯದ 301 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಗಳು ನಡೆದಿತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಜುಲೈ 26 ರಂದು ಸಂಜೆ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿಯಾದ ಸಿ. ಶಿಖಾ ಹೇಳಿದ್ದಾರೆ.
1.33 ಲಕ್ಷ ಬಾಲಕರು ಹಾಗೂ 91 ಸಾವಿರ ಬಾಲಕಿಯರೂ ಸೇರಿದಂತೆ 2.24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಎಲ್ಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯಗೊಂಡಿದೆ. ಜುಲೈ 26ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್ ಆದ http://www.pue.kar.nic.in ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಹಾಗೂ ಜುಲೈ 27ರಂದು ಎಲ್ಲ ಪಿಯು ಕಾಲೇಜುಗಳಲ್ಲೂ ಫಲಿತಾಂಶವು ಸಿಗಲಿದೆ ಎಂದು ಪಿಯು ಇಲಾಖೆ ನಿರ್ದೇಶಕಿಯಾದ ಸಿ.ಶಿಖಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಇಂದು ಸಂಜೆ 5 ಗಂಟೆಗೆ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, www.PUC kar.nic.in ವೆಬ್ಸೈಟ್ನಲ್ಲಿ ಲಭ್ಯ, ನಾಳೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಸಿಗಲಿದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.
Comments