ಡಿಸಿಎಂ ಸಹೋದರ ಡಾ. ಜಿ. ಶಿವಪ್ರಸಾದ್ ನಿಧನಕ್ಕೆಸಿಎಂ ಸಂತಾಪ ಸೂಚನೆ

ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಾ. ಶಿವಪ್ರಸಾದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಡಾ. ಶಿವಪ್ರಸಾದ್ ಅವರು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು ಅತ್ಯುತ್ತಮ ಸಂಸ್ಥೆಯಾಗಿ ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಹಲವಾರು ಮಕ್ಕಳಿಗೆ ವಿದ್ಯೆಯ ಬೆಳಕನ್ನು ನೀಡಿದ್ದಾರೆ. ಅವರ ನಿಧನ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಸಿಎಂ ಕುಮಾರಸ್ವಾಮಿ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ.
Comments