A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ನೀವೇ ಲಕ್ಷಾಧಿಪತಿ.!! ಹೇಗೆ ಅಂತಿರಾ..? ಇದನ್ನೊಮ್ಮೆ ಓದಿ..! | Civic News

ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ನೀವೇ ಲಕ್ಷಾಧಿಪತಿ.!! ಹೇಗೆ ಅಂತಿರಾ..? ಇದನ್ನೊಮ್ಮೆ ಓದಿ..!

31 Jul 2018 12:04 PM | General
4085 Report

ಹೆಣ್ಣು ಮಕ್ಕಳ ಅಭಿವೃದ್ಧಿಗಾಗಿ ಹಾಗೂ ಅವರ ಭವಿಷ್ಯಗಳಲ್ಲಿನ ವಿದ್ಯಾಭ್ಯಾಸ, ವಿವಾಹದಂತಹ ಖರ್ಚು ವೆಚ್ಚಗಳ ವಿಚಾರದಲ್ಲಿ ಪೋಷಕರಿಗೆ ನೆರವಾಗುವ ಯೋಜನೆಯೊಂದನ್ನು ಭಾರತ ಸರ್ಕಾರವು ಪ್ರಾರಂಭಿಸಿದೆ.ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದನಂತರದಲ್ಲಿ ಅನೇಕ ಸುಧಾರಣೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಂದಾಗಿ ಹೆಸರು ಮಾಡಿದ್ದಾರೆ, ಹೆಣ್ಣು ಮ್ಕಕಳನ್ನು ಸಮಸ್ಯೆಯಂತೆ ನೋಡುವ ಈ ಸಮಾಜದಲ್ಲಿ ಹೆಣ್ಣು ಮಕ್ಕಳೇ ಮನೆಯ ಭಾಗ್ಯ ಲಕ್ಷ್ಮಿಯರು ಎನ್ನುವಂತಹ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ. 

ನರೇಂದ್ರ ಮೋದಿಯವರು ‘ಭೇಟಿ ಬಚಾವೋ, ಭೇಟಿ ಪಡಾವೋ’ ಎಂಬ ಆಂದೋಲನದಡಿಯಲ್ಲಿ ಈ ಯೋಜನೆ ತಯಾರು ಮಾಡಿ ಜನವರಿ 22 2015 ರಂದು ಜಾರಿಗೊಳಿಸಿದರು. ಈ ಯೋಜನೆಯಲ್ಲಿ ಫಲಾನುಭವಿಗಳು ಸದ್ಯ ಖಾತೆಯಲ್ಲಿ ತುಂಬಿದ ಹಣಕ್ಕೆ 8.6% ಬಡ್ಡಿಯನ್ನು ಪಡೆಯುತ್ತಿದ್ದು ತೆರಿಗೆ ಉಳಿತಾಯಕ್ಕೂ ಸಹಕಾರಿಯಾಗಿದೆ. ಈ ಯೋಜನೆಯ ಪಲಾನುಭವಿ ಆಗಬೇಕಾದರೆ ಹೆಣ್ಣು ಮಗು ಹೊಂದಿರುವ ಪಾಲಕರು ಸೂಕ್ತ ದಾಖಲೆಗಳೊಂದಿಗೆ ಭಾರತದ ಯಾವುದೇ ಅಂಚೆ ಕಛೇರಿ ಅಥವಾ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾತೆ ತೆರೆಯುವ ಮೂಲಕ ಇದರ ಫಲಾನುಭವಿ ಆಗಬಹುದು. 2015 ರ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಯನ್ನು ಹರಿಯಾಣದ ಪಾಣಿಪತ್ ನಲ್ಲಿ ಲೋಕಾರ್ಪಣೆಗೊಳಿಸಿದರು. ಹೆಣ್ಣು ಮಗು ಹುಟ್ಟಿದಂದಿನಿಂದ ಅದಕ್ಕೆ ಹತ್ತು ವರ್ಷ ತುಂಬುವವರೆಗೆ ಯಾವಾಗ ಬೇಕಾದರೂ ಈ ಯೋಜನೆಯ ಅಡಿಯಲ್ಲಿ ಖಾತೆ ತೆರೆಯಬಹುದು. ಒಂದು ಮಗುವಿಗೆ ಕೇವಲ ಒಂದೇ ಖಾತೆ ತೆರೆಯಲು ಅವಕಾಶವಿದೆ. ಅವಳಿ ಜವಳಿ ಹೆಣ್ಣು ಮಕ್ಕಳಾದ ಸಂಧರ್ಭಗಳಲ್ಲೂ ಒಂದೊಂದು ಮಗುವಿಗೂ ಒಂದೊಂದು ಖಾತೆ ತೆರೆಯಲು ಅವಕಾಶವಿದೆ. ತೆರೆಯಲಾದ ಖಾತೆಯನ್ನು ಭಾರತದಾದ್ಯಂತ ಯಾವ ಸ್ಥಳಗಳಿಗೆ ಬೇಕಾದರೂ ವರ್ಗಾವಣೆ ಮಾಡಿಕೊಳ್ಳಬಹುದು.

ಖಾತೆ ತೆರೆದ ನಂತರ ಪೋಷಕರು ಕನಿಷ್ಠ ಪ್ರತೀ ವರ್ಷ ಒಂದು ಸಾವಿರ ರೂಪಾಯಿಗಳನ್ನು ಖಾತೆಗೆ ತುಂಬಬೇಕು. ಗರಿಷ್ಠ ರೂ.1,50,000 ರೂ ಗಳನ್ನು ಖಾತೆಗೆ ತುಂಬಬಹುದು . ಕನಿಷ್ಠ 1000 ರೂಪಾಯಿಗಳಿಗಿಂತ ಕಡಿಮೆ ಹಣವನ್ನು ತುಂಬಿದರೆ ಅಥವಾ ಆ ವರ್ಷ ಖಾತೆಗೆ ಹಣವೇ ತುಂಬದಿದ್ದ ಪಕ್ಷದಲ್ಲಿ ರೂ.50 ದಂಡವನ್ನಾಗಿ ಪಾವತಿಸಬೇಕಾಗುತ್ತದೆ ಹೆಣ್ಣು ಮಗು ಹತ್ತು ವರ್ಷ ಪೂರೈಸಿದ ನಂತರ ಆಕೆಯೇ ಆ ಖಾತೆಯನ್ನು ನಿಭಾಯಿಸಬಹುದು. ಹೆಣ್ಣು ಮಗುವಿಗೆ ಹದಿನೆಂಟು ವರ್ಷಗಳು ತುಂಬಿದ ಬಳಿಕ ಖಾತೆಯಲ್ಲಿ ಇರುವ ಹಣದ 50% ಹಣವನ್ನು ಶೈಕ್ಷಣಿಕ ಖರ್ಚುಗಳಿಗೆ ಪಡೆಯಲು ಅವಕಾಶವಿದೆ. ಈ ಖಾತೆಯು ಹೆಣ್ಣು ಮಗುವಿಗೆ ಇಪ್ಪತ್ತೊಂದು ವರ್ಷಗಳು ತುಂಬಿದಾಗ ಪರಿಪೂರ್ಣವಾಗುತ್ತದೆ. ಆಗ ಆ ಖಾತೆಯನ್ನು ಮುಕ್ತಾಯ ಮಾಡಬೇಕು. ಮುಕ್ತಾಯ ಮಾಡದಿದ್ದ ಪಕ್ಷದಲ್ಲಿ ಆ ಖಾತೆಯಲ್ಲಿರುವ ಹಣಕ್ಕೆ ಮುಂದೆ ಯಾವುದೇ ಬಡ್ಡಿ ಬರುವುದಿಲ್ಲ.

Edited By

Manjula M

Reported By

Manjula M

Comments