ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲೆಗೆ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
24-03-2018 ರಂದು ಬಳ್ಳಾರಿ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಹೊರಡಿಸಿದ್ದ ಅಧಿಸೂಚನೆಯನ್ನು ರಾಜ್ಯ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಇದೇ ಹುದ್ದೆಗಳಿಗೆ ಪುನಃ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಿಲ್ಲದವರಿಗೆ ಮತ್ತೊಂದು ಅವಕಾಶವನ್ನು ನೀಡಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಿರುವವರು ಮರು ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯು ತಿಳಿಸಿದೆ.
ಹುದ್ದೆಗಳ ಸಂಖ್ಯೆ : 38
ವಿದ್ಯಾರ್ಹತೆ : ಪಿಯುಸಿ ಅಥವಾ ಇದಕ್ಕೆ ಸಮನಾದ ಸಿಬಿಎಸ್'ಸಿ, ಐಸಿಎಸ್'ಇ ನಡೆಸುವ 12ನೇ ತರಗತಿಯಲ್ಲಿ ಪಾಸಾಗಿರಬೇಕು.ಕಡ್ಡಾಯವಾಗಿ ಕಂಪೂಟರ್ ತಿಳುವಳಿಕೆ ಹೊಂದಿರಬೇಕು. ಕನಿಷ್ಠ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ,2ಬಿ,3ಎ,3ಬಿ ವರ್ಗದವರಿಗೆ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿ ಪಡಿಸಲಾಗಿದೆ.
ಶುಲ್ಕ : ಸಾಮಾನ್ಯ ವರ್ಗ, 2ಎ,2ಬಿ,3ಎ,3ಬಿ ವರ್ಗದವರಿಗೆ 200 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,, ಪ್ರವರ್ಗ 1, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-08-2018 ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು www.ballari-va.kar.nic.in ವೆಬ್ ಸೈಟ್ ವಿಸಿಟ್ ಕೊಡಿ
Comments