ಬಂದ್ ಗೊಂದಲ: ಬಂದ್ ಗೆ ನೀರಸ ಪ್ರತಿಕ್ರಿಯೆ

ಇಂದು ದೇಶಾದ್ಯಂತ ಸಾರಿಗೆ ನೌಕರರ ಮುಷ್ಕರಕ್ಕೆ ಬಹುತೇಕ ಸಂಘಟನೆಗಳು ಬೆಂಬಲವನ್ನು ನೀಡಿಲ್ಲ... ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಗಳು ಎಂದಿನಂತೆ ರಸ್ತೆಗಿಳಿದಿವೆ... ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಅಧಿಕಾರಿಗಳು ಖಡಕ್ ಆಗಿ ಎಚ್ಚರಿಕೆಯನ್ನು ನೀಡಿದ್ದಾರೆ.
ಎಂದಿನಂತೆ ಸಾರಿಗೆ ಬಸ್ ಗಳು ಸಂಚರಿಸಲಿವೆ. ಮೆಟ್ರೋ, ಟೂರಿಸ್ಟ್ ಟ್ಯಾಕ್ಸಿಗಳಿಂದಲೂ ಬಂದ್ ಗೆ ಯಾವುದೇ ಬೆಂಬಲ ಇಲ್ಲ ಎಂದು ತಿಳಿಸಿವೆ.. ಸಿಐಟಿಯು, ಎಐಸಿಟಿಯು ಸೇರಿದಂತೆ ಕಾರ್ಮಿಕ ಸಂಘಟನೆಗಳು ಕೇಂದ್ರದ ಮೋಟಾರು ವಾಹನ ಕಾಯ್ದೆ ವಿರೋಧಿಸಿ ದೇಶಾದ್ಯಂತ ಮಂಗಳವಾರ ಮುಷ್ಕರಕ್ಕೆ ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನು ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿಲ್ಲ ಎಂಬುದು ಸಧ್ಯದ ಪರಿಸ್ಥಿತಿ ನೋಡಿದರೆ ತಿಳಿದು ಬರುತ್ತಿದೆ.
Comments