ತಮಿಳುನಾಡಿನ ಮಾಜಿ ಮುಖ್ಯ ಮಂತ್ರಿ ಇನ್ನಿಲ್ಲ: ರಾಜಕೀಯ ಗಣ್ಯರ ಸಂತಾಪ ಸೂಚನೆ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿಯಾದ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷದ ಪರಮೋಚ್ಛ ನೇತಾರ ಮುತ್ತುವೇಲ್ ಕರುಣಾನಿಧಿ(94) ಅವರು ಮಂಗಳವಾರ ಸಾಯಂಕಾಲ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ನಿಧನಕ್ಕೆ ಸಿ.ಎಂ ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಬಹುತೇಕ ರಾಜಕೀಯ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ಇಂದು ಚೆನ್ನೈನಲ್ಲಿ ನಡೆಯಲಿರುವ ಕರುಣಾನಿಧಿ ಅವರ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೂ ಸೇರಿದಂತೆ ರಾಜ್ಯದ ಹಲವು ಸಚಿವರು ಹಾಗೂ ರಾಜಕೀಯ ಗಣ್ಯರು ಭಾಗಿಯಾಗುವ ಸಾಧ್ಯತೆಗಳಿವೆ ಇದರ ಮಧ್ಯೆ ರಾಜ್ಯ ಸರ್ಕಾರ, ಕರುಣಾನಿಧಿಯವರ ನಿಧನದ ಪ್ರಯುಕ್ತ ರಾಜ್ಯದಲ್ಲಿ ಇಂದು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದು, ಯಾವುದೇ ಸಾರ್ವಜನಿಕ ಸಮಾರಂಭಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲವೆಂದು ತಿಳಿಸಿದೆ. ಜೊತೆಗೆ ಎಲ್ಲ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲಾಗುವುದು ಎಂದು ಕೂಡ ತಿಳಿಸಿದ್ದಾರೆ.
Comments