ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್ : ಕಾಂಗ್ರೆಸ್ ನ ಈ 10 ಶಾಸಕರು ಬಿಜೆಪಿಗೆ..!?
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್ ನ ಕೆಲ ಶಾಸಕರು ಬಿಗ್ ಶಾಕ್ ಕೊಟ್ಟಿದ್ದಾರೆ. ಶೀಘ್ರವಾಗಿ ಸಂಪುಟ ವಿಸ್ತರಣೆಗೆ ಬಿಗಿಪಟ್ಟು ಹಿಡಿದಿದ್ದು, ಸಂಪುಟದಲ್ಲಿ ಸ್ಥಾನ ಕೊಡಿ ಇಲ್ಲದಿದ್ದರೆ ಬಿಜೆಪಿ ಕಡೆ ನಮ್ಮ ನಡೆ ಎಂದು ಶಾಸಕರು ಹೇಳುತ್ತಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಿಂದ 10 ರಿಂದ 12 ಶಾಸಕರು ಬಿಜೆಪಿಗೆ ಹೋಗು ಬೆದರಿಕೆ ಒಡ್ಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಚಿವ ಸಂಪುಟ ರಚನೆಯಾಗಿದ್ದು, 6 ಸ್ಥಾನಗಳು ಮಾತ್ರ ಉಳಿದಿದ್ದು, ಆ ಸ್ಥಾನಗಳನ್ನು ಯಾರಿಗೆ ಕೊಡಬೇಕು ಎಂಬ ಚರ್ಚೆ ನಡೆಯುತ್ತಿದೆ. ಕೆಲ ಕಾಂಗ್ರೆಸ್ ಶಾಸಕರು ನೀಡಿದ ಶಾಕ್ ಗೆ ಕಾಂಗ್ರೆಸ್ ನಲ್ಲಿ ಆತಂಕ ಶುರುವಾಗಿದೆ. ಇದರಿಂದ ಅತೃಪ್ತರನ್ನು ಸೆಳೆದು ಆಪರೇಷನ್ ಕಮಲ ನಡೆಸಲು ಬಿಜೆಪಿ ಪ್ಲಾನ್ ಮಾಡಿದೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ನಮಗೂ ಗೊತ್ತಿದೆ ಯಾರು ಏನೇನು ಪ್ರಯತ್ನ ಮಾಡುತ್ತಿದ್ದಾರೆ. ಕೆಲವರಿಗೆ ಕೆಲಸವಿಲ್ಲದೆ ನಮ್ಮವರ ಬಳಿ ಬಂದು ಆಮಿಷ ಒಡ್ಡಿ ಮಾತನಾಡುತ್ತಿದ್ದಾರೆ. ಆದರೆ ನಾವು ಈಗ ಅದರ ಬಗ್ಗೆ ಮಾತನಾಡುವುದಿಲ್ಲ. ಸೂಕ್ತ ಸಮಯ ಸಂದರ್ಭದಲ್ಲಿ ಮಾತನಾಡುತ್ತೇವೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Comments