ಸ್ಯಾಂಡಲ್ ವುಡ್’ನ ಈ ಗಣ್ಯರಿಗೆ ಒಲಿದು ಬಂತು ನಾಡಪ್ರಭು ಕೆಂಪೇಗೌಡ ಪ್ರಶಸ್ತಿ..!
ಪದ್ಮಭೂಷಣ ಪ್ರಶಸ್ತಿ ವಿಜೇತ, ವಿಶ್ರಾಂತ ಕುಲಪತಿ ಪ್ರೊ.ಎಂ.ಮಹದೇವಪ್ಪ ಸೇರಿದಂತೆ ಸುಮಾರು 240 ಮಂದಿ ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖ್ಯಾತ ಚಿತ್ರನಟ ರಮೇಶ್ ಅರವಿಂದ್, ಸುದೀಪ್, ಮಜಾ ಟಾಕಿಸ್ ಖ್ಯಾತಿಯ ಸೃಜನ್ ಲೋಕೇಶ್, ಖ್ಯಾತ ನಿರ್ದೇಶಕ ಟಿ.ಎನ್.ಸೀತಾರಾಂ ಸೇರಿದಂತೆ ಸಾಹಿತ್ಯ, ಚಿತ್ರಕಲೆ, ಕಲೆ, ನಾಟಕ, ಸಂಗೀತ, ಕ್ರೀಡೆ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 240 ಮಂದಿಯನ್ನು ಈ ಬಾರಿಯ ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಬೆಂಗಳೂರು ಕರಗದ ಮರುದಿನ ಬಿಬಿಎಂಪಿಯಲ್ಲಿ ಕೆಂಪೇಗೌಡ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ವಿಧಾನಸಭೆ ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿತ್ತು.
Comments