ನನ್ನ ಕೃಷಿ ಸಾಲವನ್ನು ಮನ್ನಾ ಮಾಡಬೇಡಿ ಎಂದು ಪತ್ರ ಬರೆದ ರೈತ

ರೈತರು ಸಾಮಾನ್ಯವಾಗಿ ಮಾಡಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಲಿ. ಆ ಮೂಲಕ ರೈತರ ನೆರವಿಗೆ ಸರ್ಕಾರ ಬರಲಿ ಎಂದು ಬಯಸುವುದು ಕಾಮನ್.
ಆದರೆ ಇಲ್ಲೊಬ್ಬ ರೈತ ಮಾತ್ರ “ನನ್ನ ಸಾಲ ಮನ್ನಾ ಮಾಡಬೇಡಿ. ಒಂದು ವೇಳೆ ಸಾಲ ಮನ್ನಾ ಮಾಡಿದರೆ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆ” ಎಂದಿದ್ದಾರೆ. ಇವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕರಡಗೋಡು ಗ್ರಾಮದವರು. ಅಮರನಾಥ ಅವರು ಇತ್ತೀಚೆಗೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ, ಕೃಷಿ ಮಂತ್ರಿ ಹಾಗೂ ಜಿಲ್ಲಾಡಳಿತಕ್ಕೆ ಪತ್ರ ಬರೆದು ಹೀಗೆ ಕೇಳಿಕೊಂಡಿದ್ದಾರೆ. ಸರ್ಕಾರ 1 ಲಕ್ಷ ಸಾಲವನ್ನು ಮನ್ನಾ ಮಾಡಲು ಮುಂದಾಗಿದೆ. ಆದರೆ ಇದಕ್ಕೆ ನನ್ನ ಆತ್ಮಸಾಕ್ಷಿ ಒಪ್ಪುವುದಿಲ್ಲ. ಸರ್ಕಾರ ಸಾಲ ಮನ್ನಾ ಪಟ್ಟಿಯಲ್ಲಿ ನನ್ನ ಹೆಸರನ್ನು ಕೈ ಬಿಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.ಅಲ್ಲದೇ ನಿಜವಾಗಿಯೂ ಬಡ ರೈತರ ಸಾಲವನ್ನು ಮನ್ನಾ ಮಾಡುವಂತೆಯೂ ಕೂಡ ತಿಳಿಸಿದ್ದಾರೆ.
Comments