ಕೇರಳ ಸಂತ್ರಸ್ತರಿಗೆ ನೆರವು ನೀಡಿದ ಪವರ್ ಸ್ಟಾರ್
ಸ್ಯಾಂಡಲ್ ವುಡ್'ನಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಿನಿಮಾದಲ್ಲಿ ಮಾತ್ರ ಹೀರೋ ಎನಿಸಿಕೊಂಡಿಲ್ಲ ರಿಯಲ್ ಲೈಫ್ ನಲ್ಲಿಯೂ ಕೂಡ ಪುನೀತ್ ಜನರ ಕಷ್ಟಗಳಿಗೆ ಸ್ಪಂದಿಸಿ ಜನರಿಗೆ ಸಹಾಯ ಹಸ್ತ ನೀಡುವುದರ ಮೂಲಕ ರಿಯಲ್ ಲೈಫ್ ನಲ್ಲಿಯೂ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ.
ಕೇರಳದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಪ್ರವಾಹ ಉಂಟಾಗಿದ್ದು, ಹಲವಾರು ಜನರು ಮನೆ ಮಠ ಕಳೆದುಕೊಂಡು ನಿರಾಶ್ರಿರಾಗಿದ್ದಾರೆ. ಪ್ರವಾಹದಿಂದಾಗಿ ಕೇರಳದಲ್ಲಿ ಅನೇಕರು ಮೃತಪಟ್ಟಿದ್ದು, 50 ಸಾವಿರಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಕೇರಳದಲ್ಲಿ ಮಳೆಯಿಂದ ಉಂಟಾಗಿರುವಈ ಹಾನಿಯನ್ನು ಕಂಡು ಪುನೀತ್ ಅವರ ಹೃದಯ ಕರಗಿದೆ. ಹಾಗಾಗಿ ಕೇರಳ ಸಂತ್ರಸ್ತರಿಗೆ ಸಹಾಯ ಮಾಡಲು ಪವರ್ ಸ್ಟಾರ್ ಮುಂದಾಗಿದೆ.
Comments