ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಮತ್ತಷ್ಟು ಗಂಭೀರ
ಮಾಜಿ ಪ್ರಧಾನಿಯಾದ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಹದಗೆಡುತ್ತಿದೆ ಉಪರಾಷ್ಟ್ರಪತಿಯಾದ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಚಿವೆ ಸ್ಮತಿ ಇರಾನಿ ಸೇರಿದಂತೆ ಹಲವು ಗಣ್ಯರು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಸಂಸ್ಥೆಗೆ ಭೇಟಿ ನೀಡಿ ವಾಜುಪೇಯಿಯವರ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ.
"ಕಳೆದ ಒಂಬತ್ತು ವಾರಗಳಿಂದಲೂ ಕೂಡ ಎಐಐಎಂಎಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಜಪೇಯಿಯವರ ದೇಹಸ್ಥಿತಿ ಕಳೆದ 24 ಗಂಟೆಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಜೀವರಕ್ಷಕ ವ್ಯವಸ್ಥೆಯನ್ನು ಅಳವಡಿಸಲಾಗಿದೆ" ಎಂದು ಎಐಐಎಂಎಸ್ ಬುಧವಾರ ತಡರಾತ್ರಿ ತಿಳಿಸಿದ್ದಾರೆ. 2009ರಲ್ಲಿ ಪಾರ್ಶ್ವವಾಯು ಪೀಡಿತರಾದ ಬಳಿಕ ಅವರ ದೇಹಸ್ಥಿತಿ ಕ್ಷೀಣಿಸುತ್ತಾ ಬಂದಿತ್ತು. ಎದೆನೋವು, ಮೂತ್ರನಾಳ ಸೋಂಕು ಮತ್ತು ಮೂತ್ರ ಸ್ಥಗಿತ ಕಾರಣದಿಂದ ಜೂನ್ 11ರಂದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ದೇಹಸ್ಥಿತಿ ಇದೀಗ ಮತ್ತಷ್ಟು ಉಲ್ಬಣಿಸಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
Comments