ಸಿಎಂ ಹೆಚ್'ಡಿಕೆಗೆ ಪ್ರಧಾನಿ ಮೋದಿ ಕೊಟ್ಟ ಭರವಸೆ ಏನ್ ಗೊತ್ತಾ..!?

ನಿಮ್ಮ ಜೊತೆ ಯಾವಾಗಲೂ ನಾವಿದ್ದೇವೆ ಹಾಗೇಯೇ ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಅಗತ್ಯವಿರುವ ಎಲ್ಲಾ ಸಹಕಾರಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹೆಚ್.ಡಿ.ಕೆಯವರಿಗೆ ಭರವಸೆಯನ್ನು ನೀಡಿದ್ದಾರೆ.
ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿರುವುದಾಗಿ ಹೇಳಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪರಿಹಾರ ಕಾರ್ಯ ಮತ್ತು ರಕ್ಷಣಾ ಕಾರ್ಯಕ್ಕೆ ಕೇಂದ್ರ ಸಹಕಾರ ನೀಡಲಿದೆ.ನೆರೆಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರ ಸುರಕ್ಷತೆಗೆ ಪ್ರಾರ್ಥಿಸುವುದಾಗಿ ಟ್ವಿಟರ್ ಮೂಲಕ ಹೇಳಿದ್ದಾರೆ. ಒಟ್ಟಾರೆಯಾಗಿ ನೆರೆ ಸಂತ್ರಸ್ತರಿಗೆ ಸಹಾಯ ಮಾಡಲು ಎಲ್ಲರೂ ಮುಂದಾಗುತ್ತಿರುವುದು ನಿಜಕ್ಕೂ ಮೆಚ್ಚುವಂತದ್ದು.
Comments