ರಾಜ್ಯದ ಪ್ರಮುಖ ನದಿಗಳಲ್ಲಿ ಅಟಲ್’ಜಿ ಅವರ ಅಸ್ತಿ ವಿಸರ್ಜನೆ

ಇತ್ತಿಚಿಗಷ್ಟೆ ನಮ್ಮನ್ನೆಲ್ಲ ಅಗಲಿ ಹೋದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ತಿಯನ್ನು ದೇಶದ ಎಲ್ಲಾ ಪ್ರಮುಖ ನದಿಗಳಲ್ಲಿ ಬಿಡಲು ಬಿಜೆಪಿ ನಿರ್ಧರಿಸಿದೆ. ಇದರ ಅಂಗವಾಗಿ ಕರ್ನಾಟದ ಎಂಟು ನದಿಗಳಲ್ಲೂ ಕೂಡ ಸೆ.23 ರಂದು ಅಸ್ತಿಯನ್ನು ವಿಸರ್ಜಿಸಲಾಗುತ್ತದೆ.
ಇಂದು ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ, ಬುಧವಾರ ಬೆಳಗ್ಗೆ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷರಾದ ಅಮಿತ್ ಷಾ ಅವರು ಎಲ್ಲಾ ರಾಜ್ಯ ಘಟಕಗಳ ಅಧ್ಯಕ್ಷರ ಸಭೆಯನ್ನು ಕರೆದಿದ್ದಾರೆ. ಈ ಸಭೆಯ ಬಳಿಕ ಎಲ್ಲಾ ರಾಜ್ಯಗಳಿಗೆ ಅಸ್ತಿ ಕಳಿಸಿಕೊಡಲಾಗುತ್ತದೆ ಎಂದು ಹೇಳಿದ್ದಾರೆ. ಹಾಗೆಯೆ ಸೆ. 26 ರಂದು ಬೆಂಗಳೂರಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
Comments