ಈ ಬಾರಿ ಅದ್ದೂರಿ ದಸರ ಆಚರಣೆಗೆ ರಾಜ್ಯ ಸರ್ಕಾರದಿಂದ ಬಿತ್ತು ಬ್ರೇಕ್..!?

ಅತೀವೃಷ್ಟಿಯಿಂದಾಗಿ ಕೊಡಗಿನಲ್ಲಿ ಉಂಟಾಗಿರುವ ಭೀಕರ ಪ್ರವಾಹದ ಹಿನ್ನಲೆಯಲ್ಲಿ, ಇತಿಹಾಸ ಪ್ರಸದ್ದವಾದ ದಸರಾ ಆಚರಣೆಯನ್ನು ಈ ಬಾರಿ ರಾಜ್ಯ ಸರ್ಕಾರವು ಸರಳವಾಗಿ ಆಚರಣೆ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಕೊಡಗಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ಜಿಲ್ಲಾಡಳಿತ ತೊಡಗಿರುವ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ದಸರಾದ ಗಜಪಯಣ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇದೇ ತಿಂಗಳು ಅಂದರೆ ಆಗಸ್ಟ್ 23 ರಂದು ಗಜಪಯಣ ಕಾರ್ಯಕ್ರಮವನ್ನು ನಿಗದಿ ಮಾಡಲಾಗಿತ್ತು. ಆದರೆ, ಕಾವೇರಿ, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಆ ದಿನಾಂಕದ ಬದಲು ಇನ್ನೊಂದು ದಿನಾಂಕವನ್ನು ಸದ್ಯದಲ್ಲೇ ತಿಳಿಸಲಿದೆ ಎಂದು ಹೇಳಿದ್ದಾರೆ.
Comments