ಸಿಎಂ ಎಚ್’ಡಿಕೆಗಾಗಿ ಎರಡು ಗಂಟೆ ಕಾದು ವಾಪಸಾದ ಭಾರತಿ ವಿಷ್ಣುವರ್ಧನ್

ನಟ ದಿವಂಗತ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಾಂತರ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ ಗಂಟೆಗಟ್ಟಲೆ ಕಾದು ವಾಪಸ್ ಹಿಂತಿರುಗಿದ ಘಟನೆ ನಡೆದಿದೆ.
ಸೋಮವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ ಆಗಮಿಸಿದ್ದರು. ಭೇಟಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭಾರತಿ ವಿಷ್ಣುವರ್ಧನ್ ಅವರಿಗೆ ಸಮಯವನ್ನು ಕೂಡ ನೀಡಿದ್ದರು. ಆದರೆ, ಮುಖ್ಯಮಂತ್ರಿಗಳು ಸಾಲು ಸಾಲು ಸಭೆಗಳಲ್ಲಿ ಭಾಗಿಯಾದ ಕಾರಣ ಅವರು ಬರಲು ಸಾಧ್ಯವಾಗಲಿಲ್ಲ. ಸುಮಾರು ಎರಡು ಗಂಟೆಗಳ ಕಾಲ ಕಾದು ಕುಳಿತರೂ ಅವರನ್ನು ಒಳಗೆ ಕರೆಯದ ಕಾರಣ ಭೇಟಿಯಾಗದೆ ವಾಪಾಸಾಗಿದ್ದಾರೆ.
Comments