ದಸರಾ 2018 ಕ್ಕೆ ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯವರಿಂದ ಚಾಲನೆ: ಸಿಎಂ ಎಚ್’ಡಿಕೆ

ಮೈಸೂರು ದಸರಾ ಎಷ್ಟೊಂದು ಸುಂದರ ಎನ್ನುವುದು ಗೊತ್ತೆ ಇದೆ. ಈ ಬಾರಿಯು ಕೂಡ ಮೈಸೂರು ದಸರಕ್ಕೆ ಚಾಲನೆ ಸಿಕ್ಕಿದೆ. ವಿಶ್ವವಿಖ್ಯಾತ ಮೈಸೂರು ದಸರಾ 2018ರ ಉತ್ಸವಕ್ಕೆ ಈ ಬಾರಿ ಇನ್ಫೋಸಿಸ್ ಫೌಂಡೇಷನ್ಸ್ ಅಧ್ಯಕ್ಷರಾದ ಡಾ. ಸುಧಾ ಮೂರ್ತಿ ಅವರು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರಿನಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂಕುಮಾರಸ್ವಾಮಿ ಅವರು ಬರ ಮತ್ತು ಪ್ರವಾಹದಿಂದ ರಾಜ್ಯ ಈಗಾಗಲೇ ತತ್ತರಿಸಿ ಹೋಗಿದೆ. ಹೀಗಾಗಿ ಈ ವರ್ಷ ಸರಳ ದಸರಾ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಸಂಪ್ರದಾಯಿಕವಾಗಿ ಮತ್ತು ಸರಳವಾಗಿ ದಸರಾ ಹಬ್ಬ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ ಟಿ ದೇವೇಗೌಡ ಉಪಸ್ಥಿತರಿದ್ದರು.
Comments