ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್..!!

ಕೇಂದ್ರ ಸರ್ಕಾರಿ ನೌಕರರಿಗೆ ಬುಧವಾರ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ. ಅವರಿಗೆ ಶೇ.2ರಷ್ಟು ತುಟ್ಟಿಭತ್ಯೆ ಏರಿಕೆಯ ಪ್ರಸ್ತಾವಕ್ಕೆ ಕೇಂದ್ರ ಸಂಪುಟವು ಗ್ರೀನ್ ಸಿಗ್ನಲ್ ಕೊಟ್ಟಿದೆ. ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ತುಟ್ಟಿಭತ್ಯೆಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು ಶೇ.2ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಂಪುಟವು ಅಸ್ತು ಅಂದಿದ್ದು, ಇದು 2018,ಜು.1ರಿಂದ ಪೂರ್ವಾನ್ವಯಗೊಳ್ಳಲಿದೆ ಎಂದು ಹೇಳಲಾಗಿದೆ.
ಇದು ಈಗಿನ ಶೇ.7ರಷ್ಟು ತುಟ್ಟಿಭತ್ಯೆಗೆ ಅತಿರಿಕ್ತವಾಗಲಿದೆ ಎಂದು ಸರ್ಕಾರವು ತಿಳಿಸಿದೆ. ಸಂಪುಟದ ಈ ನಿರ್ಧಾರದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 6112.20 ಕೋ.ರೂ. ಮತ್ತು 2018-19ನೇ ಸಾಲಿನಲ್ಲಿ ಜುಲೈ 2018ರಿಂದ ಫೆ.2019ರವರೆಗೆ ಎಂಟು ತಿಂಗಳ ಅವಧಿಗೆ 4074.80 ಕೋ.ರೂ.ಗಳ ಹೆಚ್ಚುವರಿ ಹೊರೆ ಬೀಳಲಿದೆ ಎನ್ನಲಾಗಿದೆ. ಇದರಿಂದ ಕೇಂದ್ರ ಸರ್ಕಾರದ 48.41 ಲಕ್ಷ ಉದ್ಯೋಗಿಗಳು ಮತ್ತು 62.03 ಪಿಂಚಣಿದಾರರರಿಗೆ ಲಾಭವಾಗಲಿದೆ ಎಂದು ಹೇಳಲಾಗಿದೆ.
Comments