ಸಿಎಂ ಕುಮಾರಸ್ವಾಮಿ ಸರ್ಕಾರದಿಂದ ರೈತರಿಗೆ ಸಿಗಲಿದೆ ಪವರ್ ಭ್ಯಾಗ..!!

ಸಿಎಂ ಕುಮಾರಸ್ವಾಮಿಯವರ ಸರ್ಕಾರ ಬಂದ ದಿನದಿಂದಲೂ ರೈತರಿಗೆ ಒಂದಲ್ಲ ಒಂದು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಸಾಲಭಾದೆಯಿಂದ ಋಣ ಮುಕ್ತರನ್ನಾಗಿಸಲು ಸಾಲಮನ್ನಾ ನಿರ್ಧಾರವನ್ನು ಕೈಗೊಂಡಿದ್ದಾರೆ. ಅಷ್ಟೆ ಅಲ್ಲದೆ ರೈತರಿಗೆ ಪ್ರೋತ್ಸಾಹ ನೀಡಲು ಅವರೆ ಗದ್ದಗೆ ಇಳಿದು ನಾಟಿ ಮಾಡಲಿದ್ದಾರೆ. ಇದೀಗ ರೈತರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ
ಪ್ರತಿ ದಿವಸ ಕನಿಷ್ಠ 10 ಗಂಟೆಗಳ ಕಾಲ ರೈತರಿಗೆ ವಿದ್ಯುತ್ ನೀಡುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಅವರು ಬುಧವಾರ ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೈಲಾಂಚದಲ್ಲಿ ನಡೆದ ಸಮಾರಂಭದಲ್ಲಿ ಜನರಿಂದ ಆಹವಾಲು ಸ್ವೀಕಾರ ಮಾಡಿದ ಬಳಿಕ ಈ ವಿಷಯದ ಬಗ್ಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಹಗಲಿನಲ್ಲಿ ಎರಡು ಗಂಟೆಗಳ ಕಾಲ ತ್ರೀಫೇಸ್ ವಿದ್ಯುತ್ ಪೂರೈಕೆ ಸೇರಿದಂತೆ ಪ್ರತಿ ದಿವಸ ಕನಿಷ್ಠ 10 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಸಂಬಂಧಪಟ್ಟ ಅಧಿಕಾರಿಗಳಗೆ ಸೂಚನೆ ನೀಡುತ್ತೇವೆ ಎಂದು ತಿಳಿಸಿದರು.
Comments