ವಾಯುವಜ್ರ-ವೋಲ್ವೋ ಬಸ್‌ಗಳಲ್ಲಿ ಉಚಿತ ಪ್ರಯಾಣ..! ಯಾರಿಗೆ ಈ ಸೌಲಭ್ಯ..!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕೆ ಎಸ್ ಆರ್ ಟಿ ಸಿ ಸಂಸ್ಥೆಯು ಇದೀಗ ಅಂಧರಿಗೆ ವಿಶೇಷ ಸೌಲಭ್ಯವನ್ನು ಕಲ್ಪಿಸುತ್ತಿದೆ. ವಾಯುವಜ್ರ, ವೋಲ್ವೋ ಸೇರಿದಂತೆ ಎಲ್ಲ ಬಗೆಯ ಬಸ್‌ಗಳಲ್ಲಿ ಅಂಧರಿಗೆ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆಯು ತಿಳಿಸಿದೆ.
ಈ ಸಂಬಂಧದ ವಿಚಾರಣೆ ವೇಳೆ ವಾದಿಸಿದ ಕೆಎಸ್‌ಆರ್‌ಟಿಸಿ ಪರ ವಕೀಲರು, ವಾಯುವಜ್ರ ಹಾಗೂ ವೋಲ್ವೋ ಸೇರಿದಂತೆ ಎಲ್ಲ ರೀತಿಯ ಬಸ್‌ಗಳಲ್ಲಿ ಅಂಧರಿಗೆ ಉಚಿತವಾಗಿ ಸಂಚರಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.ಹಾಗೂ ಹಿಂದಿನ ಸೇವೆ ಹಿಂಪಡೆದ ಆದೇಶವನ್ನು ಇದೀಗ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿಸಿ ನ್ಯಾಯಪೀಠಕ್ಕೆ ತಿದ್ದುಪಡಿ ಆದೇಶದ ಪ್ರತಿಯನ್ನು ಸಲ್ಲಿಸಿದರು. ಅದಕ್ಕೆ ಪ್ರತಿವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಭಾಗಶಃ ಅಂಧತ್ವ ಹೊಂದಿರುವವರಿಗೂ ಉಚಿತ ಬಸ್ ಪಾಸ್ ಸೌಲಭ್ಯ ದೊರಕಿಸಿಕೊಡಲು ನಿರ್ದೇಶನ ನೀಡಬೇಕು ಎಂದು ಕೋರಿದರು. ಇನ್ನು ಮುಂದೆ ಅಂಧರು ಉಚಿತವಾಗಿ ಬಸ್ಸಿನಲ್ಲಿ ಓಡಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
Comments