ರಾಜ್ಯ ಸರ್ಕಾರದಿಂದ ಕೊಡಗು ನಿರಾಶ್ರಿತ ಕುಟುಂಬಗಳಿಗೆ 50 ಸಾವಿರ ರೂ ಪರಿಹಾರ

ಇತ್ತಿಚಿಗೆ ಅತೀವೃಷ್ಟಿಯಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಹಾಗು ಭೂಕುಸಿತ ಸಂಭವಿಸಿತು. ಇದರಿಂದಾಗಿ ಮನೆ ಕಳೆದುಕೊಂಡಿರುವ ಕೊಡಗಿನ ನಿರಾಶ್ರಿತ ಕುಟುಂಬಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರವು ಇದೀಗ ನಿರ್ಧಾರ ಮಾಡಿದೆ.
ಕೊಡಗಿನಲ್ಲಿ ಸಂಭವಿಸಿದ ಪ್ರವಾಹ ಹಾಗು ಭೂಕುಸಿತದಿಂದಾಗಿ ಮನೆ ಕಳೆದುಕೊಂಡಿರುವರಿಗೆ ಎಸ್ ಡಿಎಫ್ ಆರ್ ಪ್ರಕಾರ 3,800 ರೂ. ಪರಿಹಾರ ನೀಡಲು ಅವಕಾಶವಿದೆ. ಆದರೆ ಕೊಡಗು ಪ್ರವಾಹ ಸಂತ್ರಸ್ತರ ನೆರವಿಗಾಗಿ ಸಿಎಂ ಪರಿಹಾರ ನಿಧಿಯಲ್ಲಿ ಹೆಚ್ಚು ಹಣ ಸಂಗ್ರಹವಾದ ಹಿನ್ನೆಲೆಯಲ್ಲಿ 1500 ಕ್ಕೂ ಹೆಚ್ಚು ಕುಟುಂಬಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರವು ತೀರ್ಮಾನ ಕೈಗೊಳ್ಳಲಾಗಿದೆ. ಹಣಕಾಸು ಇಲಾಖೆ 50 ಸಾವಿರ ರೂ. ಪರಿಹಾರ ವಿತರಿಸಲು ಅನುಮತಿ ನೀಡಿದೆ. ಜೊತೆಗೆ ಸಚಿವ ಸಂಪುಟ ಸಭೆಯಲ್ಲೂ ಪರಿಹಾರ ವಿತರಿಸುವ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ ಎಂದು ಸಿಎಂ ಕುಮಾರಸ್ವಾಮಿಯವರು ತಿಳಿಸಿದ್ದಾರೆ.
Comments