ಮುಖ್ಯಮಂತ್ರಿ ಮಾತೃಶ್ರೀ ಯೋಜನೆಗೆ ಸಿಕ್ತು ಗ್ರೀನ್ ಸಿಗ್ನಲ್: ಗರ್ಭಿಣಿಯರಿಗೆ ಸಿಗುವ ಹಣವೆಷ್ಟು ಗೊತ್ತಾ..?

ರಾಜ್ಯ ಸರ್ಕಾರವು ಬಿಪಿಎಲ್ ಕುಟುಂಬದ ಗರ್ಭಿಣಿಯರಿಗೆ ಗುಡ್ ನ್ಯೂಸ್ ನೀಡಿದ್ದು, ಮಾತೃಶ್ರೀ ಯೋಜನೆ ಮೂಲಕ ಬಿಪಿಎಲ್ ಕುಟುಂಬದ ಗರ್ಭಿಣಿಯರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವ ರಾಜ್ಯ ಸರ್ಕಾರದ ಯೋಜನೆಗೆ ಸಚಿವ ಸಂಪುಟ ಅಸ್ತು ಅಂದಿದೆ.
ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಬಜೆಟ್ ಮಂಡನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯನ್ನು ಘೋಷಣೆ ಮಾಡಿದ್ದರು. ಈ ಯೋಜನೆ ಮೂಲಕ ಹೆರಿಗೆ ಪೂರ್ವದ ಮೂರು ತಿಂಗಳು ಹಾಗೂ ಹೆರಿಗೆ ನಂತರದ ಮೂರು ತಿಂಗಳು ತಲಾ ಒಂದು ಸಾವಿರದಂತೆ ಹಣ ಸಿಗಲಿದೆ. ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯ ಮುಖಾಂತರ ಫಲಾನುಭವಿಗಳು ಒಟ್ಟು 6 ಸಾವಿರ ರೂ. ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.
Comments