5 ಜಿಲ್ಲೆಗಳಿಗೆ ಪ್ರವಾಸ ರಾಯಭಾರಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಈಗಾಗಲೇ ಮೈಸೂರು ಭಾಗಕ್ಕೆ ಪ್ರವಾಸೋದ್ಯಮ ಅಭಿವೃದ್ಧಿಗೆ ರಾಯಭಾರಿಯಾಗಲು ಮೈಸೂರು ರಾಜ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಇದೀಗ ಆ ಮನವಿಗೆ ಒಪ್ಪಿಗೆಯನ್ನು ಸೂಚಿಸಿದ್ದಾರೆ.
ಈ ವಿಷಯದ ಬಗ್ಗೆ ಪ್ರವಾಸೋದ್ಯಮ ಹಾಗೂ ರೇಷ್ಮೆ ಇಲಾಖೆ ಸಚಿವರಾದ ಸಾ.ರಾ. ಮಹೇಶ್ ಮಾಹಿತಿಯನ್ನು ನೀಡಿದ್ದಾರೆ. 'ಸರ್ಕಾರದ ಪರವಾಗಿ ಐದು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ರಾಯಭಾರಿ ಆಗುವಂತೆ ಯದುವೀರ್ ಕೃಷ್ಣದತ್ತ ಒಡೆಯರ್ ಅವರಿಗೆ ಮನವಿ ಮಾಡಲಾಗಿತ್ತು. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗೆ ಪ್ರವಾಸೋದ್ಯಮ ರಾಯಭಾರಿ ಆಗಬೇಕು. ಈ ಮೂಲಕ ಮೈಸೂರು ಭಾಗವನ್ನು ದಕ್ಷಿಣ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದೆವು. ಇದಕ್ಕೆ ಪೂರಕವಾಗಿ ಸ್ಪಂದಿಸಿ ಒಪ್ಪಿಗೆಯನ್ನು ಮೈಸೂರು ರಾಜ ವಂಶಜಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚಿಸಿದ್ದಾರೆ' ಎಂದು ಸಾ.ರಾ ಮಹೇಶ್ ತಿಳಿಸಿದ್ದಾರೆ.
Comments