ನಿರುದ್ಯೋಗಿಗಳಿಗೊಂದು ಗುಡ್ ನ್ಯೂಸ್, ಪ್ರಾರಂಭವಾಗಲಿದೆ ಉದ್ಯೋಗ ಮೇಳ
ಇತ್ತಿಚಿಗೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಲೆ ಇವೆ. ಆದ ಕಾರಣ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 29 ಹಾಗೂ 30 ರಂದು ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ. ರಾಜ್ಯದ ವಿವಿಧ ಪ್ರತಿಷ್ಠಿತ ಉದ್ಯೋಗದಾತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ.
ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಉದ್ಯೋಗಕ್ಕಾಗಿ ಮನವಿ ಸಲ್ಲಿಸಿದವರು, ಜನತಾ ದರ್ಶನ ಅರ್ಜಿಯ ಸ್ವೀಕೃತಿ, ಸ್ವವಿವರ ಮತ್ತು ಅಗತ್ಯ ದಾಖಲೆಗಳೊಂದಿಗೆ ಅಂದು ಹಾಜರಾಗಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-4455 4455 ನ್ನು ಸಂಪರ್ಕಿಸಬಹುದಾಗಿದೆ.
Comments