ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಕ್ತು ಗುಡ್’ನ್ಯೂಸ್

ಹಿಂದೆ ತಡೆ ಹಿಡಿಯಲಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮತ್ತೆ ಈದೀಗ ಶುರುವಾಗಿದೆ. ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೂ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ತಡೆ ಹಿಡಿಯಲಾಗಿದ್ದ ವರ್ಗಾವಣೆ ಪ್ರಕ್ರಿಯೆ ಇಂದಿನಿಂದ ಮತ್ತೆ ಪ್ರಾರಂಭವಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಸುದ್ದಿಗಾರರೊಂದಿಗೆ ಈ ವಿಷಯ ತಿಳಿಸಿದ್ದಾರೆ. 2007 ರ ಶಿಕ್ಷಣ ಕಾಯ್ದೆ ಪ್ರಕಾರ ಶಿಕ್ಷಕರ ಈ ವರ್ಗಾವಣೆ ನಡೆಯಬೇಕಿದೆ ಎಂದರು. ಕಡ್ಡಾಯ ಮತ್ತು ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಕಾನೂನಾತ್ಮಕವಾಗಿ ಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ವರ್ಗಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು ಎಂದು ತಿಳಿಸಿದ್ದಾರೆ..ಇದೀಗ ಈ ಕುರಿತು ಕಾನೂನು ತಜ್ಞರ ಸಲಹೆಯನ್ನು ಪಡೆದಿದ್ದು, ಶಿಕ್ಷಣ ಕಾಯ್ದೆ ಅನ್ವಯವೇ ಶಿಕ್ಷಕರ ವರ್ಗಾವಣೆ ಮಾಡುವಂತೆ ಸಲಹೆ ನೀಡಿದ್ದಾರೆ.
Comments