ಮದ್ದೂರಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಗೆ ಸತತ 2ನೇ ಭಾರಿ ಗಾಂಧಿಗ್ರಾಮದ ಹಿರಿಮೆ ಸಲ್ಲಿಕೆ

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಯು ಸತತ ಎರಡನೇ ಬಾರಿಗೆ 2017-18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಅ.2ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ನಡೆಯಲಿದೆ.
ಕಳೆದ ವರ್ಷವೂ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿತ್ತು ಸರಕಾರಿ ಅನುದಾನಗಳ ಸಮರ್ಪಕ ಬಳಕೆ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನೈರ್ಮಲ್ಯಕ್ಕೆ ಮೊದಲ ಆದ್ಯತೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಾಧಿಸಿದ ಪ್ರಗತಿ ಜಲ ಮರುಪೂರಣಕ್ಕೆ ಆದ್ಯತೆ ಪರಿಗಣಿಸಿ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.ಗ್ರಾಮಸ್ಥರ ಸಹಕಾರ ಸಂಘ ಸಂಸ್ಥೆಗಳ ಉತ್ತಮ ಸಹಕಾರ ಹಾಗೂ ಬೆಂಬಲ ಆಡಳಿತ ಮಂಡಳಿಯ ಉತ್ತಮ ಕಾರ್ಯದಿಂದಾಗಿ ಈ ಪ್ರಶಸ್ತಿ ಲಭಿಸಲು ಸಹಕಾರಿಯಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಮತಿ ಲೀಲಾವತಿ ಯವರು ತಿಳಿಸಿದ್ದಾರೆ.
Comments