ಇನ್ನು ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ.
ಇನ್ನೂ ಒಂದು ವಾರಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ. ಇದೇ ವೇಳೆ ಅವರು ಈ ಬಾರಿ ಹಿಂಗಾರು ಮಳೆಯ ಅಬ್ಬರ ಕೂಡಾ ಜೋರಾಗಿರಲಿದ್ದು ಈಗಾಗಲೇ ಆಂಧ್ರ ಹಾಗೂ ತಮಿಳುನಾಡಿನಲ್ಲೂ ಆರಂಭವಾಗಿದೆ. ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಇದೇ ತಿಂಗಳಲ್ಲಿ ನಾಲ್ಕು ದಿನಗಳ ಕಾಲ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.
Comments