ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್

05 Oct 2018 11:20 AM | General
1251 Report

ನಿರುದ್ಯೋಗಿಗಳಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ. ಕರ್ನಾಟಕ ಸರ್ಕಾರ ಎಂಪ್ಲಾಯ್ ಎಂಬ ಜಾಬ್ ಪೋರ್ಟಲ್ ಹಾಗೂ ಮೊಬೈಲ್ ಅಪ್ಲಿಕೇಶನ್ ಸಿದ್ದಗೊಳಿಸುತ್ತಿದ್ದು, ಈ ವೇದಿಕೆ ಉದ್ಯೋಗಾಕಾಂಕ್ಷಿಗಳಿಗೆ ಖಾಸಗಿ ಕ್ಷೇತ್ರದಲ್ಲಿರುವ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಿದೆ. ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ ಮತ್ತು ಭಾರತೀಯ ಕೈಗಾರಿಕೆ ಒಕ್ಕೂಟದ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇದರ ಬಗ್ಗೆ ಮಾಹಿತಿ ನೀಡಿರುವ ಕಾರ್ಮಿಕ ಇಲಾಖೆಯು ಪ್ರಧಾನ ಕಾರ್ಯದರ್ಶಿಯಾದ ಆದಿತ್ಯ ಅಮ್ಲನ್ ಬಿಸ್ವಾಸ್, ರಾಜ್ಯದಲ್ಲಿರುವ ನಿರುದ್ಯೋಗಿಗಳಿಗೆ ಉದ್ಯೋಗ ಹುಡುಕಲು ಒಂದು ವೇದಿಕೆ ಈ ಆ್ಯಪ್ ಆಗಿರುತ್ತದೆ, ಜೊತೆಗೆ ಉದ್ಯೋಗಪತಿಗಳಿಗೂ ಕೌಶಲ್ಯಪೂರ್ಣ ಉದ್ಯೋಗಿಗಳ ಹುಡುಕಾಟಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ನವೆಂಬರ್ 1ರಂದು ರಾಜ್ಯೋತ್ಸವ ಸಂದರ್ಭದಲ್ಲಿ ಪೋರ್ಟಲ್ ಮತ್ತು ಆಪ್ ಎರಡನ್ನೂ ಅನಾವರಣಗೊಳಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ತಿಳಿಸಿದರು..

Edited By

Manjula M

Reported By

Manjula M

Comments