ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ಆಂಬ್ಯುಲೆನ್ಸ್ ಸೇವೆ ಪ್ರಾರಂಭ

ನಮ್ಮ ಮೆಟ್ರೋ ಚಾಲ್ತಿಗೆ ಬಂದಾಗಿನಿಂದ ಕೂಡ ಸಾರ್ವಜನಿಕರಿಗೆ ತುಂಬಾ ಉಪಯೋಗವಾಗಿದೆ.. ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಂಡಂತಾಗಿದೆ.. ಇದೀಗ ನಮ್ಮ ಮೆಟ್ರೋ ಮತ್ತೊಮದು ಸೇವೆಯನ್ನು ಜಾರಿಗೆ ತರಲು ನಿರ್ಧಾರ ಮಾಡಿದೆ. ಏನಪ್ಪಾ ಅದು ಅಂತಾ ಯೋಚನೆ ಮಾಡುತ್ತಿದ್ದೀರಾ.. ಮುಂದೆ ಓದಿ
ಅಕ್ಟೋಬರ್ 1ರಂದು ಕೆಂಪೇಗೌಡ ಮೆಟ್ರೊ ನಿಲ್ದಾಣಕ್ಕೆ ಆಂಬ್ಯುಲೆನ್ಸ್ ವ್ಯಾನ್ ಮತ್ತು ಬೈಕ್ ಆಂಬ್ಯುಲೆನ್ಸ್ ನ್ನು ನೀಡಲಾಯಿತು. ದಿನನಿತ್ಯ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಕಾಲಿಡುವ ಕೆಂಪೇಗೌಡ ಮೆಟ್ರೊ ನಿಲ್ದಾಣಕ್ಕೆ ಆಂಬ್ಯುಲೆನ್ಸ್ ಸೇವೆ ಅನಿವಾರ್ಯವಾಗಿತ್ತು ಎಂದು ಮೆಟ್ರೊ ನಿಗಮದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅನಾರೋಗ್ಯದಿಂದ ಈ ಮೆಟ್ರೊ ನಿಲ್ದಾಣದಲ್ಲಿ ಪ್ರಯಾಣಿಕರು ಬೀಳುವ ಪ್ರಕರಣಗಳು ನಡೆಯುತ್ತಿರುತ್ತವೆ. ಕೆಲವೊಮ್ಮೆ ನಿಲ್ದಾಣದೊಳಗೆ ಬಿದ್ದು ಕೈ ಕಾಲು ಮುರಿಯುವುದು, ಹೃದಯಾಘಾತವಾಗುವುದು ಇತ್ಯಾದಿ ಘಟನೆಗಳು ನಡೆಯುತ್ತಿರುತ್ತದೆ. ಪ್ರಯಾಣಿಕರಿಗೆ ತುರ್ತು ಆರೋಗ್ಯ ಸೇವೆ ನೀಡಲು ಆಂಬ್ಯುಲೆನ್ಸ್ ಸೇವೆ ಅನಿವಾರ್ಯವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Comments