ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸುಧಾಮೂರ್ತಿ

ವಿಶ್ವವಿಖ್ಯಾತವಾದ ನಾಡಹಬ್ಬ ಮೈಸೂರು ದಸರಾಗೆ ಇಂದಿನಿಂದ ವಿದ್ಯುಕ್ತ ಚಾಲನೆ ದೊರೆತಿದೆ. ಈ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 7.30 ರ ಸುಮಾರಿಗೆ ಇನ್ಫೋಸಿಸ್ ಸಂಸ್ಥಾಪಕಿಯಾದ ಸುಧಾಮೂರ್ತಿ 2018 ನೇ ಸಾಲಿನ ಮೈಸೂರು ದಸರಾವನ್ನು ಉದ್ಘಾಟನೆ ಮಾಡಿದರು.
ಚಾಮುಂಡೇಶ್ವರಿಯ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಹಬ್ಬಕ್ಕೆ ಚಾಲನೆ ನೀಡಲಾಯಿತು. ಡಾ.ಸುಧಾಮೂರ್ತಿಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಚಿವರಾದ ಜಿ.ಟಿ.ದೇವೇಗೌಡ, ಸಾರಾ ಮಹೇಶ್, ಜಯಮಾಲ, ಎಂಪಿ ಪ್ರತಾಪ್ ಸಿಂಹ, ಶಾಸಕರಾದ ಎಲ್ ನಾಗೇಂದ್ರ, ಎಸ್. ಎ ರಾಮದಾಸ್, ಸೇರಿದಂತೆ ಹಲವು ಮುಖಂಡರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂದಿನಿಂದ ಮೈಸೂರಿನಲ್ಲಿ ದಸರಾ ಮುಗಿಯುವವರೆಗೂ ಕೂಡ ಜನಜಾತ್ರೆ ಸೇರಿರುತ್ತದೆ. ಹಾಗೇ ನವರಾತ್ರಿ ಉತ್ಸವವನ್ನು ಕಣ್ಣು ತುಂಬಿಕೊಳ್ಳಲು ನಾನಾ ಕಡೆಯಿಂದ ಜನರು ಬರುತ್ತಾರೆ.
Comments