ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವೇ..? ಹಾಗಾದ್ರೆ ನೀವು ಮಾಡಬೇಕಿರುವುದು ಇಷ್ಟೆ..!?

ಮತ ಹಾಕುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿರುತ್ತದೆ. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ಚಿಂತೆ ಮಾಡ್ಬೇಡಿ, ನಿಮ್ಮ ಹೆಸರನ್ನು ಸೇರಿಸುವುದಕ್ಕೆ 2019ರ ಜನವರಿ 1ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಅವಕಾಶ ನೀಡಲಾಗಿದೆ.
ಈಗಿರುವ ಮತದಾರರ ಪಟ್ಟಿಯಲ್ಲಿನ ಹೆಸರು ತಿದ್ದುಪಡಿಗೆ ಕೂಡ ಅವಕಾಶ ಮಾಡಿಕೊಡಲಾಗಿದೆ. ಅಕ್ಟೋಬರ್ 10ರಿಂದ ನವೆಂಬರ್ 10ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿಯಲ್ಲಿ ಮಾತನಾಡಿದ ಅವರು ಜನವರಿ 4ರಂದು ನೂತನ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟವಾಗುತ್ತದೆ. ಪರಿಷ್ಕೃತ ಪಟ್ಟಿಯಲ್ಲಿ ಹೆಸರು ಇದ್ದರಷ್ಟೇ ಮತ ಹಾಕುವ ಅವಕಾಶವಿರುತ್ತದೆ. ಹೀಗಾಗಿ ಎಲ್ಲರೂ ಆ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿ ಕೊಂಡರು. ಇದಲ್ಲದೇ 2019ರ ಜನವರಿ 1ಕ್ಕೆ 18 ವರ್ಷ ವಯಸ್ಸು ಪೂರ್ಣಗೊಂಡವರು ಮತದಾರರ ಪಟ್ಟಿ ಸೇರ್ಪಡೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
Comments