ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಿಕ್ತಿದೆ 10 ಲಕ್ಷದವರೆಗೆ ಸಾಲ ಸೌಲಭ್ಯ..! ಫಲಾನುಭವಿಗಳು ಯಾರ್ಯಾರು..?

ಈಗಾಗಲೇ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಮಹಿಳೆಯರು ಸ್ವತಂತ್ರವಾಗಿ ಜೀವನ ನಡೆಸಲು ಸಹಕಾರಿಯಾಗಿದೆ.. ಇದೀಗ ಮಹಿಳೆಯರಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಕಾಯಕ ಯೋಜನೆಯಡಿ 10 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ಸಹಕಾರ ಸಚಿವರಾದ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ.
ಮೂಡಿಗೆರೆ ತಾಲೂಕು ಬಣಕಲ್‍ನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ ಸಂದರ್ಭದಲ್ಲಿ ನಿರುದ್ಯೋಗಿ ಮಹಿಳೆಯರು ಸ್ವಂತ ಉದ್ಯೋಗ ಕಟ್ಟಿಕೊಳ್ಳುವ ದೃಷ್ಟಿಯಿಂದ ನಮ್ಮ ಸರ್ಕಾರ ಹತ್ತು ಲಕ್ಷದವರೆಗೆ ಸಾಲ ನೀಡುವ ಕಾಯಕ ಯೋಜನೆಯನ್ನು ಜಾರಿಗೆ ತಂದಿದೆ. ಈ ಹತ್ತು ಲಕ್ಷ ಸಾಲದಲ್ಲಿ ಐದು ಲಕ್ಷ ಬಡ್ಡಿ ರಹಿತವಾಗಿ ನೀಡಲಾಗುತ್ತದೆ. ಉಳಿದ ಐದು ಲಕ್ಷಕ್ಕೆ ಶೇ. 4 ರ ಬಡ್ಡಿ ದರದಲ್ಲಿ ನೀಡಲಾಗುವುದು ಎಂದು ಹೇಳಿದ ಅವರು, ನಮ್ಮ ಮೈತ್ರಿ ಸರ್ಕಾರ ರೈತರ, ಶೋಷಿತರ, ದೀನ ದಲಿತರ ಉದ್ಧಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ ಎಂದರು.. ಮೈತ್ರಿಸರ್ಕಾರದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಇದರಿಂದ ಎಲ್ಲರಿಗೂ ಕೂಡ ಅನುಕೂಲವಾಗಲಿದೆ.
Comments