ರಾಜ್ಯಾದ್ಯಂತ ಮತ್ತೆ ಶುರುವಾಗಲಿದೆ ಮಳೆರಾಯನ ಅಬ್ಬರ
ಮತ್ತೆ ರಾಜ್ಯಾದ್ಯಂತ ಮಳೆರಾಯನ ಆರ್ಭಟ ಪ್ರಾರಂಭವಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ತಿಳಿಸಿದೆ. ಎರಡು ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಮಳೆಯಾಗಲಿದೆ.
ಪ್ರಮುಖವಾಗಿ ರಾಜ್ಯದ ಕರಾವಳಿ, ಮಲೆನಾಡು ,ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿಯೂ ಕೂಡ ಗುಡುಗು ಸಹಿತ ಮಳೆಯಾಗಲಿದೆ. ಸೋಮವಾರ ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಮೂಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಮನೆಯಿಂದ ಹೊರಹೋಗುವ ಮುನ್ನ ಛತ್ರಿ, ಜರ್ಕಿನ್ ತಗೊಂಡು ಹೋಗುವುದನ್ನು ಮರೆಯಬೇಡಿ..
Comments