ರಾಜ್ಯಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್: ಸ್ವಸಹಾಯ ಬ್ಯಾಂಕುಗಳಲ್ಲಿ ಮಹಿಳೆಯರಿಗೆ ಸಿಗಲಿದೆ ಬಡ್ಡಿರಹಿತ ಸಾಲ

ಈಗಾಗಲೇ ರಾಜ್ಯ ಸರ್ಕಾರವು ಮಹಿಳೆಯರು ಸ್ವಾವಲಂಭಿ ಜೀವನ ನಡೆಸಲಿ ಹಾಗೂ ಅವರ ಏಳಿಗೆಗಾಗಿ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ ಇದೇ ನಿಟ್ಟಿನಲ್ಲಿ ಮತ್ತೊಂದು ಹೊಸ ಯೋಜನೆಯೊಂದನ್ನು ಆರಂಭಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾತೃಶ್ರೀ ಯೋಜನೆ,ಮಾತೃ ವಂದನಾ ಯೋಜನೆಗಳನ್ನು ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ತಂದಿವೆ.
ಇದೀಗ ಸ್ವಸಹಾಯ ಸಂಘ ಹಾಗು ಸ್ರ್ತೀಶಕ್ತಿ ಮಹಿಳಾ ಸಂಘಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿ, ಈ ಮೂಲಕ ಮಹಿಳೆಯರಿಗಾಗಿಯೇ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಸ್ವಸಹಾಯ ಬ್ಯಾಂಕುಗಳಲ್ಲಿ ಬಡ್ಡಿರಹಿತ ಸಾಲ ನೀಡುತ್ತಿದೆ. ಈ ಯೋಜನೆಯನ್ನು ಸ್ತ್ರಿಯರು ಸದುಪಯೋಗ ಪಡಿಸಿಕೊಳ್ಳಬೇಕು..
Comments