ನಾಳೆ ಗದುಗಿನ ತೋಂಟದಾರ್ಯ ಸ್ವಾಮೀಜಿಗಳ ಅಂತ್ಯಕ್ರಿಯೆ

ಗದಗಿನ ತೋಂಟದಾರ್ಯ ಸ್ವಾಮಿಗಳು ಇಂದು ಲಿಂಗೈಕ್ಯರಾಗಿದ್ದಾರೆ.ನಾಳೆ ಡಂಬಳ ಮಠದ ಅಂಗಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. ತೋಂಟದಾರ್ಯ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನಾಳಿನ ಎಲ್ಲಾ ಕಾರ್ಯಕ್ರಮಗಳು ಕೂಡ ರದ್ದಾಗಿದೆ..ತೋಂಟದಾರ್ಯ ಶ್ರೀ ಅಂತ್ಯಕ್ರಿಯೆಯಲ್ಲಿ ಸಿಎಂ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಗದಗಿನ ತೋಂಟದಾರ್ಯ ಸ್ವಾಮೀಜಿಗಳ ನಿಧನಕ್ಕೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪವನ್ನು ಸೂಚಿಸಿದ್ದಾರೆ. ನಾಡು ಕಂಡ ಅಪರೂಪದ ಧಾರ್ಮಿಕ ಗುರುಗಳಾಗಿರುವ ತೋಂಟದಾರ್ಯ ಶ್ರೀಗಳು ಲಿಂಗೈಕ್ಯರಾದ ಸುದ್ದಿ ಕೇಳಿ ತೀವ್ರ ಅಘಾತವಾಗಿದೆ ಎಂದಿದ್ದಾರೆ. ಸ್ವಾಮೀಜಿಗಳ ನಿಧನಕ್ಕೆ ಹಲವಾರು ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.
Comments