ರೈತರ ಸಾಲ ಮನ್ನಾ ಆಗಲು ಈ ದಾಖಲೆಗಳು ಕಡ್ಡಾಯ..! ಯಾವುವು ಗೊತ್ತಾ..?
ಈಗಾಗಲೇ ಸಾಲ ಮನ್ನಾ ಮಾಡುವ ಖುಷಿ ವಿಚಾರವನ್ನು ರೈತರಿಗೆ ನೀಡಿರುವ ರಾಜ್ಯ ಸರ್ಕಾರ ಅದಕ್ಕೆ ಸಲ್ಲಿಸಬೇಕಾದ ದಾಖಲೆಗಳ ಪಟ್ಟಿಯನ್ನು ತಿಳಿಸಿದೆ.. ಪ್ರಸ್ತುತ ರಾಷ್ಟ್ರೀಕೃತ ಬ್ಯಾಂಕುಗಳು ಕೃಷಿ ಸಾಲ ಪಡೆದ ರೈತರ ಮಾಹಿತಿ ಒದಗಿಸಿದ್ದು, ಈ ಮಾಹಿತಿಯನ್ನು ಸರ್ಕಾರ ಅಭಿವೃದ್ಧಿ ಪಡಿಸಿದ ತಂತ್ರಾಂಶದಲ್ಲಿ ಅಳವಡಿಸಿ, ಪರಿಶೀಲನೆ ನಡೆಸಲಾಗುತ್ತಿದೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಸೇಡಂ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ನವೆಂಬರ್ 5 ರಿಂದ ಪ್ರಾಯೋಗಿಕವಾಗಿ ಸಾಲ ಮನ್ನಾ ಪ್ರಕ್ರಿಯೆ ಆರಂಭಿಸಲಾಗಿದೆ. ನಂತರ ಈ ತಾಲ್ಲೂಕುಗಳ ಬ್ಯಾಂಕುಗಳ ಶಾಖೆಗಳು ಮಾಹಿತಿ ಪರಿಶೀಲನೆ ಪೂರ್ಣಗೊಳಿಸಿದ ನಂತರ ನವೆಂಬರ್ 12 ರಿಂದ ರೈತರು ತಾವು ಸಾಲ ಪಡೆದ ಬ್ಯಾಂಕಿಗೆ ಭೇಟಿ ಕೊಟ್ಟು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಅವರು ಹೊಂದಿರುವ ಕೃಷಿ ಭೂಮಿಯ ಮಾಹಿತಿ ಒದಗಿಸುವಂತೆ ಸೂಚಿಸಲಾಗುವುದು. ನಂತರ ಇತರ ತಾಲ್ಲೂಕುಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಸಹಕಾರಿ ಬ್ಯಾಂಕುಗಳಲ್ಲಿ ಈಗಾಗಲೇ ಮಾಹಿತಿ ಪರಿಶೀಲನಾ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ ಅಂತ್ಯದೊಳಗೆ 6000 ಶಾಖೆಗಳ 20 ಲಕ್ಷ ರೈತರ ಮಾಹಿತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
Comments