ರಾಜ್ಯೋತ್ಸವ ಪ್ರಶಸ್ತಿ ಪ್ರಧಾನಕ್ಕೆ ಡೇಟ್ ಫಿಕ್ಸ್..!!
ನವೆಂಬರ್ ಬಂತು ಅಂದರೆ ಸಾಕು ಎಲ್ಲೆಲ್ಲೂ ಕೂಡ ಕನ್ನಡದ ಹಬ್ಬ.. ಹಳದಿ ಕೆಂಪು ಬಾವುಟ ಬಾನೆತ್ತರದಲ್ಲಿ ಹಾರಾಡುತ್ತಿರುತ್ತವೆ.. ಈ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ಮುಂದಾಗಿದ್ದಾರೆ. ಉಪಚುನಾವಣೆ ಇದ್ದ ಹಿನ್ನಲೆಯಲ್ಲಿ ಹಾಗೂ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ಸರ್ಕಾರ ಇದೀಗ ದಿನಾಂಕವನ್ನು ನಿಗದಿ ಮಾಡಿದೆ.
ನವೆಂಬರ್ 15 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಬಾರಿ ಒಟ್ಟು 63 ಮಂದಿ ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈಗಾಗಲೇ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಗೆ ಅಂಗೀಕಾರದ ಮುದ್ರೆ ಹಾಕಿದ್ದಾರೆ ಎಂದು ಹೇಳಲಾಗಿದ್ದು, ಸಚಿವೆ ಜಯಮಾಲಾ ಈ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.
Comments