ಟಿಪ್ಪು ಜಯಂತಿ ಆಚರಣೆ: ಬೆಂಗಳೂರಿನಲ್ಲಿ 15 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ..!!

ಟಿಪ್ಪು ಜಯಂತಿಯನ್ನು ಮಾಡಬಾರದು ಎಂದು ಹಲವಾರು ವಿರೋಧ ಪಕ್ಷಗಳು ಹೋರಾಟವನ್ನು ನಡೆಸಿದರು..ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯದ ಮೈತ್ರಿ ಸರ್ಕಾರ ಇಂದು ಟಿಪ್ಪು ಜಯಂತಿ ಆಚರಣೆಯನ್ನು ನಡೆಸುತ್ತಿದ್ದು, ಇಂದು ಬೆಳಗ್ಗೆ 11.30 ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಡಿಸಿಎಂ ಪರಮೇಶ್ವರ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಟಿಪ್ಪು ಜಯಂತಿ ಆಚರಣೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಗರದದ್ಯಾಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 15 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ವಿಧಾನಸೌಧ ಸುತ್ತಮುತ್ತ 500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕಾವಲು ಕಾಯಲಿದ್ದಾರೆ. ಇನ್ನು ಟಿಪ್ಪು ಜಯಂತಿ ಅಚರಿಸಬಾರದು ಎಂದು ನಮಗೆ ಯಾವುದೇ ಮನವಿ ದೂರುಗಳು ಬಂದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ. ಆದರೂ ಹಲವಾರು ವಿರೋಧಗಳ ನಡುವೆಯೂ ಇಂದೂ ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡುತ್ತಿದೆ.
Comments