ಬಿಎಂಟಿಸಿ ಬಸ್ ಚಾಲಕರು ಕರ್ತವ್ಯದ ವೇಳೆ ಮೊಬೈಲ್ ಬಳಸಿದರೆ ಕೆಲಸ ಕಳ್ಕೊತ್ತೀರಾ..! ಹುಷಾರ್..!!
ಇತ್ತಿಚಿಗೆ ಸಾಕಷ್ಟು ರಸ್ತೆ ಅಪಘಾತಗಳು ಸಂಭವಿಸುತ್ತಿವೆ.. ಇದನ್ನ ಗಮನದಲ್ಲಿಟ್ಟುಕೊಂಡು ಆಡಳಿತ ಮಂಡಳಿ ಒಂದು ನಿರ್ಧಾರಕ್ಕೆ ಬಂದಿದೆ. ರಸ್ತೆ ಅಪಘಾತಗಳಿಗೆ ಮೊಬೈಲ್ ಕೂಡ ಒಂದು ಕಾರಣವಾಗಿದ್ದು ಬಿಎಂಟಿಸಿ ಬಸ್ ಚಾಲಕರು ಕರ್ತವ್ಯದ ವೇಳೆ ಮೊಬೈಲ್ ಬಳಸುವುದು ಮತ್ತು ತಮ್ಮ ಬಳಿ ಮೊಬೈಲ್ ಇಟ್ಟುಕೊಳ್ಳುವುದನ್ನು ಬಿಎಂಟಿಸಿ ನಿರ್ಬಂಧವನ್ನು ಹೇರಿದೆ.
ನವೆಂಬರ್ 15 ರ ಬಳಿಕ ಚಾಲಕರು ಕರ್ತವ್ಯದ ವೇಳೆ ಮೊಬೈಲ್ ಬಳಸುವುದು ಕಂಡುಬಂದಲ್ಲಿ ಸೇವೆಯಿಂದ ತೆಗೆದುಹಾಕುವ ಎಚ್ಚರಿಕೆಯನ್ನು ಬಿಎಂಟಿಸಿ ನೀಡಿದೆ. ನಿರ್ವಾಹಕರು ಕರ್ತವ್ಯದ ವೇಳೆ ಮೊಬೈಲ್ ಬಳಸುವಂತಿಲ್ಲ. ಆದರೆ ತಮ್ಮ ಬಳಿ ಮೊಬೈಲ್ ಇರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.. ಬಸ್ ಚಲಿಸುವಾಗ ಮೊಬೈಲ್ ನಲ್ಲಿ ಮಾತನಾಡುವುದು, ಬಳಸುವುದು ಅಪಾಯಕಾರಿ ಎಂದು ತಿಳಿದಿದ್ದರೂ ಚಾಲಕರು ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
Comments