ಕೇಂದ್ರ ಸಚಿವ ಅನಂತ್ ಕುಮಾರ್ ಇನ್ನಿಲ್ಲ.. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದರಾದ ಅನಂತ್ ಕುಮಾರ್(59) ಅವರು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಲಂಡನ್ನಿನಲ್ಲಿ ಚಿಕಿತ್ಸೆ ಪಡೆದು, ನಂತರ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 12 ರಿಂದ 14 ರ ವರೆಗೆ ರಾಜ್ಯಾದ್ಯಾಂತ ಶೋಕಾಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಅವಧಿಯಲ್ಲಿ ಯಾವುದೆ ಅಧಿಕೃತ ಸಾರ್ವಜನಿಕ ಸಮಾರಂಭಗಳು, ಮನರಂಜಾನ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸುವಂತಿಲ್ಲ.. ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರದ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಚಿವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Comments