ಅನಂತಕುಮಾರ್ ಅಂತಿಮ ದರ್ಶನಕ್ಕಾಗಿ ಇಂದು ಸಂಜೆ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದರಾದ ಅನಂತ್ ಕುಮಾರ್(59) ಅವರು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಲಂಡನ್ನಿನಲ್ಲಿ ಚಿಕಿತ್ಸೆ ಪಡೆದು, ನಂತರ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಗ್ಗೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ೭:೩೦ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ಟಿ.ಆರ್. ಮಿಲ್ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ. ಈಗಾಗಲೇ ರುದ್ರಭೂಮಿಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
Comments