ಅನಂತ್ ಕುಮಾರ್ ಅಂತಿಮ ಯಾತ್ರೆ ಪ್ರಾರಂಭ : ಬಿಜೆಪಿ ಕಚೇರಿಯತ್ತ ‘ಅನಂತ’ ಪಾರ್ಥಿವ ಶರೀರ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದರಾದ ಅನಂತ್ ಕುಮಾರ್(59) ಅವರು ಸೋಮವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಲಂಡನ್ನಿನಲ್ಲಿ ಚಿಕಿತ್ಸೆ ಪಡೆದು, ನಂತರ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 12 ರಿಂದ 14 ರ ವರೆಗೆ ರಾಜ್ಯಾದ್ಯಾಂತ ಶೋಕಾಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಕೇಂದ್ರ ಸಚಿವ ಅನಂತ್ ಕುಮಾರ್ ಪಾರ್ಥೀವ ಶರೀರದ ಮೆರವಣಿಗೆ ಆರಂಭವಾಗಿದ್ದು, ಬಸವನಗುಡಿಯಲ್ಲಿರುವ ಅನಂತ್ ಕುಮಾರ್ ನಿವಾಸದಿಂದ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯತ್ತ ಅಂತಿಮ ಯಾತ್ರೆ ಹೊರಟಿದೆ. ಬೆಳಗ್ಗೆ 9 ರ ವರೆಗೆ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನೂ 9.30 ರ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ದೊರೆಯಲಿದೆ. ಅಲ್ಲಿಂದ 1 ಗಂಟೆ ನಂತರ ಚಾಮರಾಜಪೇಟೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
Comments