ಇವರುಗಳಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ "ಬಡ್ಡಿರಹಿತ ಸಾಲ"

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ 'ಬಡವರ ಬಂಧು' ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡುತ್ತಿದ್ದಾರೆ.ಖಾಸಗಿ ವ್ಯಕ್ತಿಗಳಿಂದ ದುಬಾರಿ ಬಡ್ಡಿ ದರದಲ್ಲಿ ಸಾಲ ಪಡೆಯುವುದನ್ನು ತಪ್ಪಿಸುವುದು ಮತ್ತು ಅವರಿಂದ ನಡೆಯುವ ಕಿರುಕುಳ ತಡೆಯುವುದರ ಜತೆಗೆ ಬೀದಿ ಬದಿ ವ್ಯಾಪಾರಿಗಳನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವ್ಯಾಪಾರಸ್ಥರಿಗೆ 5000 ರೂ., 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವ್ಯಾಪಾರಸ್ಥರಿಗೆ, 3000 ರೂ. ಹಾಗೂ ಜಿಲ್ಲಾ ನಗರ ಪ್ರದೇಶ ವ್ಯಾಪ್ತಿಯಲ್ಲಿರುವವರಿಗೆ 1000 ರೂ. ಸಾಲ ನೀಡಲಾಗುತ್ತದೆ. ಒಟ್ಟು 53 ಸಾವಿರ ಮಂದಿ ಇದರ ಪ್ರಯೋಜನ ಪಡೆಯಲಿದ್ದಾರೆ. ಕಿರುಸಾಲವನ್ನು ವಾರ್ಷಿಕ 50 ಸಾವಿರ ಫಲಾನುಭವಿಗಳಿಗೆ ನೀಡಲಾಗುವುದು. ಡಿಸಿಸಿ ಬ್ಯಾಂಕ್‌ಗಳು, ಪಟ್ಟಣ ಸಹಕಾರಿ ಬ್ಯಾಂಕ್‌ಗಳು, ಮಹಿಳಾ ಸಹಕಾರಿ ಬ್ಯಾಂಕ್‌ಗಳು ಶೂನ್ಯ ಬಡ್ಡಿದರದಲ್ಲಿ ಕಿರುಸಾಲವನ್ನು ನೀಡಲಿವೆ. ಫಲಾನುಭವಿಗಳನ್ನು ಗುರುತಿಸಲು ಬ್ಯಾಂಕ್‌ಗಳ ಸಿಬ್ಬಂದಿ ನಿಗದಿತ ಪ್ರದೇಶ, ಮಾರುಕಟ್ಟೆಗಳಲ್ಲಿ ಮೊಬೈಲ್ ವ್ಯಾನ್‌ಗಳ ಮೂಲಕ ಹಾಜರಿರುತ್ತಾರೆ. ನಿಗದಿತ ಅರ್ಜಿ ಸಲ್ಲಿಸುವ ಮೂಲಕ ಅಲ್ಲಿ ನೋಂದಾಯಿಸಿಕೊಂಡು ಸಾಲ ಪಡೆದುಕೊಳ್ಳಬಹುದಾಗಿದೆ.
Comments